
ಪ್ರಜಾವಾಣಿ ವಾರ್ತೆಬೆಳಗಾವಿ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಯುಕ್ತ ಜನತಾ ದಳ (ಜೆಡಿಯು) ವತಿಯಿಂದ ರಾಜ್ಯದಲ್ಲಿ 10 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು’ ಎಂದು ರಾಜ್ಯ ಘಟಕದ ಅಧ್ಯಕ್ಷ ಡಾ. ಎಂ.ಪಿ.ನಾಡಗೌಡ ಮಂಗಳವಾರ ಇಲ್ಲಿ ತಿಳಿಸಿದರು.
‘ಬೀದರ್‌ನಿಂದ ವೈಜನಾಥ ಪಾಟೀಲ ಹಾಗೂ ದಾವಣಗೆರೆಯಿಂದ ಮಹಿಮಾ ಪಟೇಲ್ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಾನು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಹೈಕಮಾಂಡ್ ನಿರ್ಧಾರಕ್ಕೆ ತಲೆಬಾಗುತ್ತೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.