ADVERTISEMENT

ಬಿಜೆಪಿ ಶಾಸಕರ ಕ್ಷೇತ್ರಕ್ಕೆ ತಲಾ 10 ಹೆಚ್ಚುವರಿ ಶಾಲಾ ಕೊಠಡಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 21:15 IST
Last Updated 3 ಆಗಸ್ಟ್ 2022, 21:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬಿಜೆಪಿ ಶಾಸಕರು ಪ್ರತಿನಿಧಿಸುವ 88 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 10ರಂತೆ ಒಟ್ಟು 880 ಶಾಲಾ ಕೊಠಡಿಗಳನ್ನು ಹೆಚ್ಚುವರಿಯಾಗಿ ‌ನಿರ್ಮಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರ ಟಿಪ್ಪಣಿಯಂತೆ ಇಲಾಖೆ ಈ ಕ್ರಮ ತೆಗೆದುಕೊಂಡಿದೆ.

ಈ ಕುರಿತಂತೆ ಆದೇಶ ಹೊರಡಿಸಲಾಗಿದ್ದು, ಆಯಾ ಕ್ಷೇತ್ರಗಳ ಶಾಸಕರಿಂದ ಮಾಹಿತಿ ಪಡೆದು ಕೊಠಡಿ ನಿರ್ಮಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದಾರೆ.

ರಾಜ್ಯದ ಸರ್ಕಾರಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಒಟ್ಟು 6,601 ಹೊಸ ಕೊಠಡಿಗಳನ್ನು ನಿರ್ಮಿಸಲು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಅದರ ಅನ್ವಯ, ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ತಲಾ 20 ಕೊಠಡಿಗಳಂತೆ 4,480 ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಇದೀಗ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಇಲಾಖೆ ಮುಂದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.