ADVERTISEMENT

41 ತಾಲ್ಲೂಕುಗಳಲ್ಲಿ 10 ಹಾಸಿಗೆಗಳ ಟೆಲಿ ಐಸಿಯು: ಸಿ.ಎಂ

ಹೊಸ ಸೇವೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 19:06 IST
Last Updated 28 ನವೆಂಬರ್ 2022, 19:06 IST
ರಾಜ್ಯದ 41 ತಾಲ್ಲೂಕು ಆಸ್ಪತ್ರೆಗಳಲ್ಲಿ ಅನುಷ್ಠಾನಗೊಳಿಸಿರುವ ಟೆಲಿ ಐಸಿಯು ಸೇವೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನ ಎಂಎಂಸಿಆರ್‌ಐ ಅಮೃತ ಮಹೋತ್ಸವ ಭವನದಲ್ಲಿ ಸೋಮವಾರ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಆರೋಗ್ಯ ಇಲಾಖೆಯ ಕಾರ್ಯದರ್ಶಿ ನವೀನ್‌ರಾಜ್‌, ಶಾಸಕ ಎಲ್.ನಾಗೇಂದ್ರ, ಆಧಾರ್ ಸಿಟಿಒ ಸಂಸ್ಥಾಪಕ ಶ್ರೀಕಾಂತ್ ನಡುಮನಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕ ಎಸ್.ಎ.ರಾಮದಾಸ್, ನಿಗಮ ಮಂಡಳಿಗಳ ಅಧ್ಯಕ್ಷರಾದ ಮಹದೇವಯ್ಯ, ನಿಜಗುಣರಾಜು, ಶಿವಕುಮಾರ್‌, ಮಿರ್ಲೆ ಶ್ರೀನಿವಾಸಗೌಡ ಇದ್ದಾರೆ

ಮೈಸೂರು: ರಾಜ್ಯದ 41 ಸರ್ಕಾರಿ ಆಸ್ಪತ್ರೆ ಗಳಲ್ಲಿ ತಲಾ 10 ಹಾಸಿಗೆಗಳ ಟೆಲಿ ಐಸಿಯು ಸೇವೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಸಾರ್ವಜನಿಕರಿಗೆ ಸಮರ್ಪಿಸಿದರು.

ಇಲ್ಲಿನ ಜೆ.ಕೆ.ಮೈದಾನದ ಮೈಸೂರು ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕಾಲೇಜಿನ ಗ್ರಂಥಾಲಯ ಮತ್ತು ವಿದ್ಯಾರ್ಥಿಗಳ ಹಾಸ್ಟೆಲ್‌ ಅನ್ನೂ ಉದ್ಘಾಟಿಸಿದರು.

‘ಆರೋಗ್ಯ ಇಲಾಖೆ, ಇ–ಆಡಳಿತ ಪ್ರತಿಷ್ಠಾನ ಹಾಗೂ ಕರುಣಾ ಟ್ರಸ್ಟ್‌ ಸಹಯೋಗದಲ್ಲಿ ಟೆಲಿ ಐಸಿಯು ಸೇವೆ ಉಪಕ್ರಮ ಅನುಷ್ಠಾನಗೊಳಿಸಲಾಗಿದೆ. ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ‘ಟೆಲಿ ಐಸಿಯು ಹಬ್’ ಸ್ಥಾಪಿಸಿ, ತಾಲ್ಲೂಕು ಆಸ್ಪತ್ರೆಗಳಿಗೆ ಇಲ್ಲಿಂದಲೇ ತಜ್ಞರು ಚಿಕಿತ್ಸೆಗೆ
ಮಾರ್ಗದರ್ಶನ ನೀಡಲಿದ್ದಾರೆ ಎಂದರು.

ADVERTISEMENT

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.