ADVERTISEMENT

ಪತ್ನಿಗೆ ನಾಯಿಯಿಂದ ಸಂಭೋಗ ಮಾಡಿಸಿದ್ದ ವ್ಯಕ್ತಿಗೆ 10 ವರ್ಷಗಳ ಕಠಿಣ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2019, 13:39 IST
Last Updated 10 ಏಪ್ರಿಲ್ 2019, 13:39 IST
   

ಬೆಳಗಾವಿ: ಪತ್ನಿಯೊಂದಿಗೆ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದುದ್ದಲ್ಲದೇ, ನಾಯಿಮರಿಯಿಂದ ಸಂಭೋಗ ಮಾಡಿಸಿದ್ದ ವ್ಯಕ್ತಿಗೆ ಇಲ್ಲಿನ 8ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಬುಧವಾರ ₹ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ ₹ 5ಸಾವಿರ ದಂಡ ವಿಧಿಸಿದೆ.

ರಾಮದುರ್ಗ ತಾಲ್ಲೂಕಿನ ಕಟಕೋಳ ಠಾಣೆ ವ್ಯಾಪ್ತಿಯಲ್ಲಿ 2017ರ ಮಾರ್ಚ್ 22ರಂದು ಘಟನೆ ನಡೆದಿತ್ತು. 2010ರಲ್ಲಿ ಮದುವೆಯಾಗಿದ್ದ ವ್ಯಕ್ತಿ 2015ರಿಂದ ಪತ್ನಿಗೆ ಕಿರುಕುಳ ನೀಡಲು ಆರಂಭಿಸಿದ್ದ. ಮೂವರು ಮಕ್ಕಳೊಂದಿಗೆ ಪತ್ನಿಯನ್ನು ರಾತ್ರೋರಾತ್ರಿ ಹೊರಹಾಕಿದ್ದ. ನೊಂದ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು.

8ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿ.ಬಿ. ಸೂರ್ಯವಂಶಿ ಶಿಕ್ಷೆ ಪ್ರಕಟಿಸಿದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಕಿರಣ ಎಸ್.ಪಾಟೀಲ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.