ಬೆಂಗಳೂರು: ವಿವಿಧ ಸಮುದಾಯಗಳ ವಿದ್ಯಾರ್ಥಿಗಳಿಗೆ ಪಾವತಿಸಬೇಕಿರುವ ವಿದ್ಯಾರ್ಥಿ ವೇತನದ ಬಾಕಿಯನ್ನು ನೀಡಲು ₹ 100 ಕೋಟಿ ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನ ಪರಿಷತ್‌ನಲ್ಲಿ ಮಂಗಳವಾರ ಬಜೆಟ್‌ಗೆ ಅನುಮೋದನೆ ಪಡೆಯುವ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ‘ನಿಮಗೆ ಅಲ್ಪಸಂಖ್ಯಾತರ ಮೇಲೆ ಸಿಟ್ಟಿರಬಹುದು. ಆದರೆ, ಆ ವರ್ಗದ ಮಕ್ಕಳ ಮೇಲೆ ಅದನ್ನು ತೋರಿಸಬೇಡಿ. ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ವಿದ್ಯಾರ್ಥಿ ವೇತನ ತಡೆ ಹಿಡಿಯಲಾಗಿದೆ. ಅದನ್ನು ಬಿಡುಗಡೆ ಮಾಡಿ’ ಎಂದರು.
ಆಗ ಉತ್ತರ ನೀಡಿದ ಮುಖ್ಯಮಂತ್ರಿ, ‘ಅಲ್ಪಸಂಖ್ಯಾತರೂ ಸೇರಿದಂತೆ ಯಾವುದೇ ಸಮುದಾಯದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನೂ ರದ್ದು ಮಾಡುವುದಿಲ್ಲ. ಬಾಕಿ ಇರುವ ವಿದ್ಯಾರ್ಥಿ ವೇತನ ವಿತರಿಸಲು ₹ 100 ಕೋಟಿ ಒದಗಿಸುತ್ತೇನೆ. ಎಲ್ಲ ವಿದ್ಯಾರ್ಥಿ ವೇತನಗಳೂ ಮೊದಲಿನಂತೆಯೇ ಮುಂದುವರಿಯುತ್ತವೆ’ ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.