ADVERTISEMENT

ಮುಂದಿನ ವರ್ಷ 100 ಪಿಯು ಕಾಲೇಜು ಆರಂಭ

ಮೊರಾರ್ಜಿ ದೇಸಾಯಿ ವಸತಿ ಶಾಲೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 19:48 IST
Last Updated 26 ಜನವರಿ 2020, 19:48 IST
   

ಬಾಗಲಕೋಟೆ: ‘ರಾಜ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 100 ಪದವಿ ಪೂರ್ವ ಕಾಲೇಜು ಆರಂಭಿಸಲಾಗುವುದು’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ನವನಗರದ ಸೆಕ್ಟರ್ ನಂ 44 ರಲ್ಲಿ ನಿರ್ಮಿಸಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

‘ಹಾಗೆಯೇ ರಾಜ್ಯದಲ್ಲಿ 100 ಹೊಸ ಹಾಸ್ಟೆಲ್ ಕಟ್ಟಡಗಳ ನಿರ್ಮಾಣಕ್ಕೆ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ ₹500 ಕೋಟಿ ಶೀಘ್ರ ಬಿಡುಗಡೆಯಾಗಲಿದೆ ಎಂದು ಅವರು ಹೇಳಿದರು.

ADVERTISEMENT

ಅನುದಾನ ಕೋರಿ ಸಂಬಂಧಿಸಿದ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಲಾಗಿದೆ. ವಾರದಲ್ಲಿಯೇ ಅನುದಾನ ಬಿಡುಗಡೆಯ ಭರವಸೆ ದೊರೆತಿದೆ’ ಎಂದು ಅವರು
ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.