ADVERTISEMENT

ಜುಲೈ 12ರಿಂದ 11 ದಿನ ಅಧಿವೇಶನ

​ಪ್ರಜಾವಾಣಿ ವಾರ್ತೆ
Published 28 ಜೂನ್ 2019, 20:01 IST
Last Updated 28 ಜೂನ್ 2019, 20:01 IST
..
..   

ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಜುಲೈ 12ರಿಂದ 26 ರವರೆಗೆ 11 ದಿನ ನಡೆಯಲಿದೆ.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ‘ದೋಸ್ತಿ’ ಪಕ್ಷಗಳು ಹೀನಾಯವಾಗಿ ಸೋತಿವೆ. ಈ ವಿಷಯ ಆಡಳಿತಾರೂಢ ಜೆಡಿಎಸ್‌ ಹಾಗೂ ಕಾಂಗ್ರೆಸ್‌ನಲ್ಲಿ ಆಂತರಿಕ ಬೇಗುದಿ ಎಬ್ಬಿಸಿದೆ. ಮೈತ್ರಿ ಬಗ್ಗೆಯೇ ಅಪಸ್ವರವೂ ಕೇಳಿ ಬರುತ್ತಿದೆ.

ಕಾಂಗ್ರೆಸ್‌ನಲ್ಲಿ ಅತೃಪ್ತ ಶಾಸಕರ ನಡೆ ನಿಗೂಢವಾಗಿದೆ. ಸಚಿವ ಸ್ಥಾನ ಸಿಗದೇ ಇರುವ ಅತೃಪ್ತರು ಬೆಂಬಲಿಗರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಅವರಲ್ಲಿ ಕೆಲವರು ಅಧಿವೇಶನದ ಸಂದರ್ಭದಲ್ಲಿ ರಾಜೀನಾಮೆ ನೀಡುವ ಮೂಲಕ ಮೈತ್ರಿ
ಸರ್ಕಾರಕ್ಕೆ ಮುಜುಗರ ಉಂಟು ಮಾಡಲು ತಯಾರಿ ನಡೆಸಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.