ADVERTISEMENT

1,142 ಪೊಲೀಸ್‌ ಹುದ್ದೆ ಭರ್ತಿ: ರಾಜ್ಯ ಸರ್ಕಾರ ಹೈಕೋರ್ಟ್‌ಗೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2021, 16:53 IST
Last Updated 30 ನವೆಂಬರ್ 2021, 16:53 IST
   

ಬೆಂಗಳೂರು: ಖಾಲಿ ಇರುವ 1,142 ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಹಾಗೂ ನಾಲ್ಕು ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗಳನ್ನು ನಿಗದಿತ ಕಾಲಮಿತಿಯೊಳಗೆ ಭರ್ತಿ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ಹೈಕೋರ್ಟ್, ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲರು ಪ್ರಮಾಣ ಪತ್ರ ಸಲ್ಲಿಸಿ, ಖಾಲಿ ಹುದ್ದೆಗಳ ನೇಮಕ ಪ್ರಕ್ರಿಯೆ ಮತ್ತು ಅದರ ನಿಗದಿತ ಅವಧಿಯ ವಿವರಗಳ ಬಗ್ಗೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ನಿಗದಿತ ಕಾಲಮಿತಿಯೊಳಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ADVERTISEMENT

ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ‘ನಿಗದಿತ ಕಾಲಮಿತಿಯೊಳಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ. ಯಾವುದೇ ನಿರ್ಲಕ್ಷ್ಯ ಆಗದಂತೆ ನೋಡಿಕೊಳ್ಳಿ’ ಎಂದು ನಿರ್ದೇಶಿಸಿ ಅರ್ಜಿ ವಿಲೇವಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.