ADVERTISEMENT

ರಾಜ್ಯಕ್ಕೆ ಹರಿದು ಬಂದ ₹1.15 ಲಕ್ಷ ಕೋಟಿ ಬಂಡವಾಳ: ಸಚಿವ ಎಂ.ಬಿ. ಪಾಟೀಲ

₹1.15 ಲಕ್ಷ ಕೋಟಿ ಬಂಡವಾಳ ಹೂಡಿಕೆ ಹರಿದುಬಂದಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

​ಪ್ರಜಾವಾಣಿ ವಾರ್ತೆ
Published 26 ಜನವರಿ 2025, 13:21 IST
Last Updated 26 ಜನವರಿ 2025, 13:21 IST
<div class="paragraphs"><p>ಹಣ </p></div>

ಹಣ

   

ವಿಜಯಪುರ: ರಾಜ್ಯಕ್ಕೆ ಫಾಕ್ಸ್-ಕಾನ್, ಜಿಂದಾಲ್, ಟೊಯೊಟಾ, ಏರ್ ಇಂಡಿಯಾ ಮುಂತಾದ ಪ್ರತಿಷ್ಠಿತ ಕಂಪನಿಗಳಿಂದ ₹1.15 ಲಕ್ಷ ಕೋಟಿ ಬಂಡವಾಳ ಹೂಡಿಕೆ ಹರಿದುಬಂದಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ವಿಜಯಪುರದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐ-ಫೋನ್ ಬಿಡಿಭಾಗಗಳ ತಯಾರಿಕೆ, ಪವನ ವಿದ್ಯುತ್, ಕಾರು ಉತ್ಪಾದನೆ ಮತ್ತು ವಿಮಾನಗಳ ದುರಸ್ತಿ ಹಾಗೂ ನಿರ್ವಹಣೆ ಇತ್ಯಾದಿ ಕ್ಷೇತ್ರಗಳಲ್ಲಿ ಈ ಹೂಡಿಕೆ ಆಗಿದೆ. ಇದರ ಜೊತೆಗೆ ಇನ್ನೂ ₹ 1 ಲಕ್ಷ ಕೋಟಿಗೂ ಹೆಚ್ಚಿನ ಹೂಡಿಕೆಯ ಖಾತ್ರಿ ರಾಜ್ಯಕ್ಕೆ ಸಿಕ್ಕಿದೆ ಎಂದರು.

ADVERTISEMENT

ಫೆಬ್ರವರಿ 11 ರಿಂದ 14 ರವರೆಗೆ ಬೆಂಗಳೂರಿನಲ್ಲಿ ‘ಜಾಗತಿಕ ಹೂಡಿಕೆದಾರರ ಸಮಾವೇಶ’ ನಡೆಯಲಿದೆ. ಇದು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ವರದಾನವಾಗಲಿದೆ ಎಂದು ಹೇಳಿದರು.

ಬೆಂಗಳೂರು ನಗರದ ಜನತೆ ಮತ್ತು ಉದ್ಯಮಿಗಳ ಅನುಕೂಲಕ್ಕೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಇದರ ಸ್ಥಳ ಅಂತಿಮಗೊಳ್ಳಲಿದೆ ಎಂದರು.

ರಾಜ್ಯ ಸರ್ಕಾರವು ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರುತ್ತಿದ್ದು, ಇದರಲ್ಲಿ ರಫ್ತು ವಹಿವಾಟಿಗೆ ಆದ್ಯತೆ ಕೊಡಲಾಗಿದೆ.  ಬಂಡವಾಳ ಹೂಡಿಕೆ. ಉದ್ಯೋಗ ಸೃಷ್ಟಿ, ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಕೈಗಾರಿಕಾ ಪ್ರಗತಿ. ಇವು ನಮ್ಮ ಮೂಲಮಂತ್ರಗಳಾಗಿವೆ ಎಂದರು.

ಮಹಿಳಾ ಉದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅಂತಹ ಸಂಸ್ಥೆಗಳಿಗೂ ಹೆಚ್ಚಿನ ರಿಯಾಯಿತಿ, ಸಂಶೋಧನೆ ಮತ್ತು ವಿನ್ಯಾಸ ಸಂಸ್ಥೆಗಳು ತಮ್ಮ ಉತ್ಪನ್ನಗಳನ್ನು ರಾಜ್ಯದಲ್ಲೇ ಉತ್ಪಾದನೆ ಮಾಡಿದರೆ ಅದಕ್ಕೊಂದು ವಿಶೇಷ ರಿಯಾಯಿತಿ ನೀಡುವ ವ್ಯವಸ್ಥೆ ಕೂಡ ಹೊಸ ಕೈಗಾರಿಕಾ ನೀತಿಯಲ್ಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.