ADVERTISEMENT

12ರವರೆಗೆ ಅಧಿವೇಶನ

​ಪ್ರಜಾವಾಣಿ ವಾರ್ತೆ
Published 6 ಜೂನ್ 2013, 19:39 IST
Last Updated 6 ಜೂನ್ 2013, 19:39 IST

ಬೆಂಗಳೂರು: ವಿಧಾನಸಭೆಯ ಅಧಿವೇಶನವನ್ನು ಇದೇ 12ರವರೆಗೆ ನಡೆಸಲು ಗುರುವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಮೊದಲು ನಿರ್ಧರಿಸಿದಂತೆ ಶುಕ್ರವಾರಕ್ಕೆ ಅಧಿವೇಶನ ಮುಗಿಯಬೇಕಿತ್ತು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಅಪೂರ್ಣವಾಗಿರುವ ಕಾರಣ ಹೆಚ್ಚುವರಿಯಾಗಿ ಮೂರು ದಿನಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.