ADVERTISEMENT

121 ವರ್ಷಗಳ ದಾಖಲೆ ಕನಿಷ್ಠ ಉಷ್ಣಾಂಶ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2012, 19:30 IST
Last Updated 2 ಮಾರ್ಚ್ 2012, 19:30 IST

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ. ಉತ್ತರ ಒಳನಾಡಿನಲ್ಲಿ ಶೀತ ಗಾಳಿ ಬೀಸಿದೆ. ಬಳ್ಳಾರಿಯಲ್ಲಿ ಅತಿ ಗರಿಷ್ಠ ಉಷ್ಣಾಂಶ 37.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ 60 ವರ್ಷಗಳ ನಂತರ ಶುಕ್ರವಾರ (ಮಾ. 2) ಕನಿಷ್ಠ ಉಷ್ಣಾಂಶ 8.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಿಜಾಪುರದಲ್ಲಿ 121 ವರ್ಷಗಳ ನಂತರ 11.2 ಡಿಗ್ರಿ ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.