ADVERTISEMENT

134 ಟಿಎಂಸಿ ನೀರು ಬಿಡಲು ಸಾಧ್ಯವೇ ಇಲ್ಲ : ಕರ್ನಾಟಕ

​ಪ್ರಜಾವಾಣಿ ವಾರ್ತೆ
Published 6 ಜೂನ್ 2013, 14:03 IST
Last Updated 6 ಜೂನ್ 2013, 14:03 IST

ಬೆಂಗಳೂರು (ಪಿಟಿಐ): ಕಾವೇರಿ ನ್ಯಾಯಮಂಡಳಿ ತೀರ್ಪಿನಂತೆ ಜೂನ್‌ನಿಂದ ಸೆಪ್ಟಂಬರ್ ತಿಂಗಳವರೆಗೆ 134 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವೇ ಇಲ್ಲ ಎಂದು ಸರ್ವಪಕ್ಷ ಸಭೆ ನಿರ್ಣಯ ಕೈಗೊಂಡಿದೆ.

ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಯಾವುದೇ ಕಾರಣಕ್ಕೂ ಇಷ್ಟೊಂದು ದೊಡ್ಡ ಪ್ರಮಾಣದ ನೀರನ್ನು ಬಿಡಲು ಸಾಧ್ಯವೇ ಇಲ್ಲ ಮತ್ತು ಇದರ ಪ್ರಮಾಣವನ್ನು 97.82 ಟಿಎಂಸಿಗೆ ಇಳಿಸುವಂತೆ ಕಾವೇರಿ ಉಸ್ತುವಾರಿ ಸಮಿತಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.