ADVERTISEMENT

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1743ಕ್ಕೆ

​ಪ್ರಜಾವಾಣಿ ವಾರ್ತೆ
Published 22 ಮೇ 2020, 22:49 IST
Last Updated 22 ಮೇ 2020, 22:49 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ 47 ಸೇರಿದಂತೆ ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ138 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1,743ಕ್ಕೆ ಏರಿದೆ.

ಹೊಸದಾಗಿ ವರದಿಯಾದ ಪ್ರಕರಣಗಳಲ್ಲಿ 116 ಮಂದಿ ಅನ್ಯರಾಜ್ಯಗಳಿಗೆ ಪ್ರಯಾಣ ಮಾಡಿದ ಇತಿಹಾಸವನ್ನು ಹೊಂದಿದ್ದಾರೆ. ಅದರಲ್ಲೂ 111 ಮಂದಿ ಮಹಾರಾಷ್ಟ್ರದಿಂದಲೇ ಬಂದವರಾಗಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ 47, ಹಾಸನದಲ್ಲಿ 14, ರಾಯಚೂರಿನಲ್ಲಿ 10, ಬೀದರ್‌ನಲ್ಲಿ 9, ತುಮಕೂರಿನಲ್ಲಿ 8, ಮಂಡ್ಯದಲ್ಲಿ 8, ವಿಜಯಪುರದಲ್ಲಿ 7, ಬೆಂಗಳೂರಿನಲ್ಲಿ 5, ಬೆಂಗಳೂರು ಗ್ರಾಮಾಂತರದಲ್ಲಿ 5, ಚಿಕ್ಕಮಗಳೂರಿನಲ್ಲಿ 5, ದಾವಣಗೆರೆಯಲ್ಲಿ 3, ಹಾವೇರಿಯಲ್ಲಿ 3, ಉಡುಪಿಯಲ್ಲಿ 3, ಧಾರವಾಡದಲ್ಲಿ 2, ಶಿವಮೊಗ್ಗದಲ್ಲಿ 2, ಯಾದಗಿರಿಯಲ್ಲಿ 2 ಹಾಗೂ ಚಿತ್ರದುರ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿಯಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಸದ್ಯ 50 ಪ್ರಯೋಗಾಲಯ
ಗಳು ಕಾರ್ಯನಿರ್ವಹಿಸುತ್ತಿದ್ದು, ಶುಕ್ರವಾರ ಒಂದೇ ದಿನ12,229 ಪರೀಕ್ಷೆ ಮಾಡಲಾಗಿದೆ. ಒಂದು ದಿನ ಮಾಡಿದ ಗರಿಷ್ಠ ಪರೀಕ್ಷೆಗಳ ಸಂಖ್ಯೆ ಇದಾಗಿದೆ.ಈವರೆಗೆ ಒಟ್ಟು 1,86,526 ಮಂದಿಯ ಗಂಟಲ ದ್ರವವನ್ನು ಪರೀಕ್ಷೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.