ADVERTISEMENT

14 ರಂದು ಸಂತ ಸೇವಾಲಾಲ್ ಜಯಂತಿ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2012, 19:30 IST
Last Updated 10 ಫೆಬ್ರುವರಿ 2012, 19:30 IST

ದಾವಣಗೆರೆ: ಸಂತ ಸೇವಾಲಾಲ್ ಮಹಾರಾಜರ ಜನ್ಮಸ್ಥಳ ಹೊನ್ನಾಳಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಫೆ. 14 ಮತ್ತು 15ರಂದು ಸೇವಾಲಾಲ್ ಜಯಂತಿ ಹಮ್ಮಿಕೊಳ್ಳಲಾಗಿದೆ.

ಹೊರ ರಾಜ್ಯಗಳಿಂದ ಮತ್ತು ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಮಾಲೆ ಧರಿಸಿ ಬರಿಗಾಲಲ್ಲಿ ನಡೆದುಕೊಂಡು ಬರುತ್ತಾರೆ. ಈ ಬಾರಿ 5 ಲಕ್ಷ ಮಾಲಾಧಾರಿಗಳು ಆಗಮಿಸಲಿದ್ದಾರೆ ಎಂದು ರಾಜ್ಯ ಬಂಜಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಬಸವರಾಜ ನಾಯ್ಕ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

14ರಂದು ರಾತ್ರಿ 8ಕ್ಕೆ ಸಭಾ ಕಾರ್ಯಕ್ರಮ, ಬಳಿಕ ರಾತ್ರಿಯಿಡೀ ಧಾರ್ಮಿಕ ಕಾರ್ಯಕ್ರಮ ನಡೆಯುವುದು. 15ರಂದು ಬೆಳಿಗ್ಗೆ 7ಕ್ಕೆ ಹೋಮ ಕಾರ್ಯಕ್ರಮ ಇರುತ್ತದೆ.
 
ಬಂಜಾರ ಸಮಾಜದ ಜಗದ್ಗುರು ರಾಮರಾವ್ ಮಹಾರಾಜ್, ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, ಸಚಿವರಾದ ರೇವುನಾಯ್ಕ ಬೆಳಮಗಿ, ಎಸ್.ಎ. ರವೀಂದ್ರನಾಥ್, ಎಂ.ಪಿ. ರೇಣುಕಾಚಾರ್ಯ ಮತ್ತಿತರರು ಭಾಗವಹಿಸುವರು ಎಂದು ಮಾಹಿತಿ ನೀಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.