ADVERTISEMENT

1.4 ಲಕ್ಷ ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2012, 19:30 IST
Last Updated 17 ಫೆಬ್ರುವರಿ 2012, 19:30 IST

ಬೆಂಗಳೂರು: ರಾಜ್ಯದ ಅಂದಾಜು 1.4 ಲಕ್ಷ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ಇದ್ದು, ಆರು ವರ್ಷದೊಳಗಿನ 61 ಸಾವಿರ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ತೀವ್ರವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ.ವಿ. ರಮಣ ರೆಡ್ಡಿ ತಿಳಿಸಿದರು.

ವಿಕಾಸಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಅವರು, `ಆರು ವರ್ಷದೊಳಗಿನ ಮಕ್ಕಳ ಪೈಕಿ ಅಂದಾಜು 35 ಸಾವಿರ ಮಂದಿ (ಶೇಕಡ 32ರಷ್ಟು) ಅಂಗನವಾಡಿಗೆ ಬರುತ್ತಿದ್ದಾರೆ. ಇವರ ಪೈಕಿ 18 ಸಾವಿರ ಮಕ್ಕಳಲ್ಲಿ ಸಾಧಾರಣ ಪ್ರಮಾಣದ ಪೌಷ್ಟಿಕಾಂಶದ ಕೊರತೆ ಇದೆ~ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.