ಬೆಂಗಳೂರು: ಬಾಲ್ಯ ವಿವಾಹಕ್ಕೆ ಪ್ರಯತ್ನಿಸುವುದು, ಸಿದ್ಧತೆ ಮಾಡುವುದು ಮತ್ತು ನಿಶ್ಚಿತಾರ್ಥ ಮಾಡುವುದನ್ನು ನಿಷೇಧಿಸುವ ಮತ್ತು ದಂಡ ವಿಧಿಸುವ ಉದ್ದೇಶದ ಬಾಲ್ಯ ವಿವಾಹ ನಿಷೇಧ(ಕರ್ನಾಟಕ ತಿದ್ದುಪಡಿ) ಮಸೂದೆ 2025 ಸೇರಿ ಒಟ್ಟು 15 ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಬಾಲ್ಯ ವಿವಾಹ ನಿಷೇಧ ಮಸೂದೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಲಕ್ಷ್ಮೀ ಹೆಬ್ಬಾಳಕರ ಅವರು ಮಂಡಿಸಿದರೆ, ಉಳಿದ 14 ಮಸೂದೆಗಳನ್ನು ಕಾನೂನು ಸಚಿವ ಎಚ್.ಕೆ.ಪಾಟೀಲ ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.