ADVERTISEMENT

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ₹15 ಲಕ್ಷ ಪರಿಹಾರ: ಸಿಎಂ ಘೋಷಣೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 18:45 IST
Last Updated 3 ಡಿಸೆಂಬರ್ 2022, 18:45 IST
   

ಬೆಂಗಳೂರು: ‘ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ನೀಡಿದಂತೆ, ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೂ ₹ 15 ಲಕ್ಷ ಪರಿಹಾರ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಚಿರತೆ ದಾಳಿ ತಡೆಯಲು ವಿಶೇಷ ತಂಡ ರಚಿಸಲಾಗಿದ್ದು, ನಿರ್ದಿಷ್ಟವಾಗಿ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ’ ಎಂದರು.

‘ಮೈಸೂರು ಮತ್ತು ಬೆಂಗಳೂರು ವಲಯದಲ್ಲಿ ಆನೆ ಕಾರಿಡಾರ್ ಸುತ್ತಮುತ್ತ ಚಿರತೆಗಳೂ ಇವೆ. ದಾಳಿಗಳನ್ನು ನಿಯಂತ್ರಿಸಲು ಹಾಗೂ ಕಾಡು ಬಿಟ್ಟು ಆಚೆ ಬಂದಿರುವ ಚಿರತೆಗಳನ್ನು ಹಿಡಿಯಲು ವಿಶೇಷ ತಂಡ ಕಾರ್ಯಾಚರಣೆ ಮಾಡಲಿದೆ’ ಎಂದರು.

ADVERTISEMENT

‘ಚಿರತೆ ದಾಳಿಗಳು ಮೊದಲು ಕಾಡು ಪಕ್ಕದಲ್ಲಿ ಆಗುತ್ತಿತ್ತು. ಆದರೆ, ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿದೆ. ಈ ವಿಷಯವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹಲವು ದಿನಗಳಿಂದ ಚಿರತೆ ಬೇಟೆಗೆ
ಪ್ರಯತ್ನಿಸಲಾಗುತ್ತಿದೆ. ಅದನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚನೆ ನೀಡಲಾಗಿದೆ’ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.