ADVERTISEMENT

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ವಿಶ್ವಪ್ರಸನ್ನ ಶ್ರೀಪಾದರು

ಪೇಜಾವರ ಮಠದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 15:54 IST
Last Updated 6 ಫೆಬ್ರುವರಿ 2020, 15:54 IST
ವಿಶ್ವಪ್ರಸನ್ನ ಶ್ರೀಪಾದರು
ವಿಶ್ವಪ್ರಸನ್ನ ಶ್ರೀಪಾದರು   

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ರಚಿಸಿರುವ ಟ್ರಸ್ಟ್‌ನಲ್ಲಿಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಪಾದರಿಗೂ ಸ್ಥಾನ ನೀಡಲಾಗಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ನಡೆದ ಚಳವಳಿಯಲ್ಲಿಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರು ಮುಂಚೂಣಿಯಲ್ಲಿದ್ದರು. ಇತ್ತೀಚೆಗೆ ಅವರು ಕೃಷ್ಣೈಕ್ಯರಾಗಿದ್ದಾರೆ.

‘ಅಯೋಧ್ಯೆಯ ರಾಮ ಮಂದಿರದ ಅಭಿವೃದ್ಧಿಗೆ ನಾವು ಯೋಜನೆಯನ್ನು ಸಿದ್ಧಪಡಿಸಿದ್ದೇವೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ ಎಂಬ ಹೆಸರಿನಲ್ಲಿ ಟ್ರಸ್ಟ್‌ ರಚಿಸಲಾಗಿದೆ’ ಎಂದು ಸಚಿವ ಸಂಪುಟ ಸಭೆಯ ನಂತರ ಬುಧವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ರಾಮ ಮಂದಿರ ನಿರ್ಮಾಣಕ್ಕಾಗಿ ಅಸ್ತಿತ್ವಕ್ಕೆ ಬಂದಿರುವ ಟ್ರಸ್ಟ್‌ನಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಸೇರಿದಂತೆ 15 ಟ್ರಸ್ಟಿಗಳಿರಲಿದ್ದಾರೆಎಂದು ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದರು.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.