ADVERTISEMENT

ಮುಂದಿನ ವರ್ಷ ದೇಶದಾದ್ಯಂತ 157 ನರ್ಸಿಂಗ್‌ ಕಾಲೇಜು ಆರಂಭ: ಮನ್‌ಸುಖ್‌ ಮಾಂಡವೀಯ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2023, 20:27 IST
Last Updated 20 ಮಾರ್ಚ್ 2023, 20:27 IST
   

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಲ್ಲಿ ದೇಶದಾದ್ಯಂತ 157 ನರ್ಸಿಂಗ್‌ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ತಿಳಿಸಿದರು.

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಅಳವಡಿಸಿಕೊಳ್ಳುವುದಕ್ಕಾಗಿ ತಜ್ಞರ ಸಲಹೆ ಪಡೆಯಲು ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ‘ಹೊಸ ನರ್ಸಿಂಗ್‌ ಕಾಲೇಜುಗಳಿಗೆ ಅನುಮತಿ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಸಂಪುಟದ ಒಪ್ಪಿಗೆ ದೊರೆತ ತಕ್ಷಣವೇ ಅನುಮತಿ ನೀಡಲಾಗುವುದು’ ಎಂದರು.

ವೈದ್ಯಕೀಯ ಪದವಿ ಸೀಟುಗಳಿಗೆ ಸಮನಾಗಿ ಸ್ನಾತಕೋತ್ತರ ವೈದ್ಯಕೀಯ ಪದವಿ ಸೀಟುಗಳ ಸಂಖ್ಯೆಯನ್ನೂ ಹೆಚ್ಚಿಸಲಾಗುವುದು. ಮುಂದಿನ ಮೂರು ವರ್ಷಗಳಲ್ಲಿ ವೈದ್ಯಕೀಯ ಪದವಿ ಸೀಟು ಮತ್ತು ಸ್ನಾತಕೋತ್ತರ ಸೀಟುಗಳ ಸಂಖ್ಯೆ ಸಮನಾಗಲಿದೆ ಎಂದು ಹೇಳಿದರು.

ADVERTISEMENT

ರಾಜ್ಯದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಮಾತನಾಡಿ, ‘ನಾವು ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಕೈಗೆಟಕುವ ದರದಲ್ಲಿ ಆರೋಗ್ಯ ಸೌಲಭ್ಯ ನೀಡುವುದು ನಮ್ಮ ಗುರಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.