ADVERTISEMENT

1,764 ಪಿಯು ಉಪನ್ಯಾಸಕರ ನೇಮಕಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2012, 19:30 IST
Last Updated 14 ಏಪ್ರಿಲ್ 2012, 19:30 IST

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಒಟ್ಟು 1,764 ಉಪನ್ಯಾಸಕರ ನೇಮಕಕ್ಕೆ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದೇ 16ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಮೇ 15 ಅರ್ಜಿ ಸಲ್ಲಿಸಲು ಕೊನೆ ದಿನ. ಶುಲ್ಕ ಪಾವತಿಸಲು ಮೇ 16 ಕೊನೆ ದಿನ.

ಪಾವತಿಸಿದ ಶುಲ್ಕ, ಚಲನ್ ವಿವರಗಳನ್ನು ಆನ್‌ಲೈನ್ ಮೂಲಕ ಅಪ್‌ಡೇಟ್ ಮಾಡಲು ಮೇ 17 ಕೊನೆ ದಿನ. ಸ್ವರ್ಧಾತ್ಮಕ ಪರೀಕ್ಷೆಗಳು ಜೂನ್ 9ರಂದು ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಆಯುಕ್ತರಾದ ವಿ.ರಶ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ವೆಬ್‌ಸೈಟ್ ವಿಳಾಸ: www.schooleducation.kar.nic.in(online)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.