ಬೆಂಗಳೂರು: ಚುನಾವಣೆಯ ಕಾರಣದಿಂದ ವಿಳಂಬವಾಗಿದ್ದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರು ಹಾಗೂ ಪದವಿ ಪೂರ್ವ ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಇದೇ 18ರಿಂದ ನಡೆಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.
ಕಳೆದ ಶೈಕ್ಷಣಿಕ ವರ್ಷದ ಕೊನೆಯಲ್ಲಿ ನಡೆಯಬೇಕಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ಮೂರು ಬಾರಿ ಮುಂದೂಡಲಾಗಿತ್ತು. ಶಿಕ್ಷಕರು ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು, ಕೌನ್ಸೆಲಿಂಗ್ ಪ್ರಕ್ರಿಯೆ ಮಾತ್ರ ಬಾಕಿ ಉಳಿದಿತ್ತು.
ಈ ಹಿಂದಿನ ಆದೇಶದಂತೆ ಉಪನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿದ್ದ ಕೌನ್ಸೆಲಿಂಗ್ ಈ ವರ್ಷ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಬಿಇಒ) ಕಚೇರಿಯಲ್ಲಿ ನಡೆಯಲಿದೆ. ಖಾಲಿಯಿರುವ ಹುದ್ದೆಗಳ ಪಟ್ಟಿಯನ್ನು ಬಿಇಒ ಕಚೇರಿಯ ಕಂಪ್ಯೂಟರ್‌ನಲ್ಲೇ ತೋರಿಸಿ, ಅಲ್ಲಿಯೇ ಹುದ್ದೆಯ ಸ್ಥಳ ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ನಂತರ ಉಪನಿರ್ದೇಶಕರು ಆದ್ಯತೆ ಮೇರೆಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.