ADVERTISEMENT

1,835 ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಸ್ತು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2021, 18:42 IST
Last Updated 19 ಮಾರ್ಚ್ 2021, 18:42 IST
ಪದವಿಪೂರ್ವ ಶಿಕ್ಷಣ ಇಲಾಖೆ
ಪದವಿಪೂರ್ವ ಶಿಕ್ಷಣ ಇಲಾಖೆ   

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2020–21ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ವಿವಿಧ ಕಾರಣಗಳಿಂದ ತೆರವಾದ ಒಟ್ಟು 2,832 ಉಪನ್ಯಾಸಕ ಹುದ್ದೆಗಳಿಗೆ ಎದುರಾಗಿ ಒಟ್ಟು 1,835 ಅತಿಥಿ ಉಪನ್ಯಾಸಕರನ್ನು ಫೆಬ್ರುವರಿಯಿಂದ ನೇಮಿಸಿಕೊಳ್ಳಲು ಪದವಿಪೂರ್ವ ಶಿಕ್ಷಣ ಇಲಾಖೆಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಅತಿಥಿ ಉಪನ್ಯಾಸಕರಿಗೆ ಗೌರವಧನ ನೀಡಲು ₹ 3 ಕೋಟಿ ಲಭ್ಯವಿದೆ. ಹೀಗಾಗಿ ವಿಷಯವಾರು ಖಾಲಿ ಇರುವ ಉಪನ್ಯಾಸಕ ಹುದ್ದೆಗಳಿಗೆ ಮಾಸಿಕ ₹ 9 ಸಾವಿರ ಗೌರವಧನದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಅನುಮತಿ ಕೋರಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಇದೇ 10ರಂದು ಸಹಮತ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT