ADVERTISEMENT

₹1.86 ಕೋಟಿ ನಗದು ವಶ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2018, 19:40 IST
Last Updated 11 ಏಪ್ರಿಲ್ 2018, 19:40 IST
ನಗದು ವಶ– ಸಾಂದರ್ಭಿಕ ಚಿತ್ರ
ನಗದು ವಶ– ಸಾಂದರ್ಭಿಕ ಚಿತ್ರ   

ಬೀದರ್: ತಾಲ್ಲೂಕಿನ ಭಂಗೂರ್‌ ಚೆಕ್‌ಪೋಸ್ಟ್‌ನಲ್ಲಿ ಬುಧವಾರ ಸಂಜೆ ಪೊಲೀಸರು ಕಾರು ತಪಾಸಣೆ ನಡೆಸಿ ಸಮರ್ಪಕ ದಾಖಲೆ ಇಲ್ಲದ ₹ 1.86 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.

ಹಣವನ್ನು ಜಿಲ್ಲಾಮಟ್ಟದ ನಿಯಂತ್ರಣ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್‌.ಸೆಲ್ವಮಣಿ ಹಾಗೂ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಸುಪರ್ದಿಗೆ ಒಪ್ಪಿಸಲಾಗಿದೆ. ಕಾರಿನಲ್ಲಿ ಇದ್ದವರು ಹೈದರಾಬಾದ್‌ನಿಂದ ಕಲಬುರ್ಗಿಯ ಬ್ಯಾಂಕ್‌ಗೆ ಹಣ ಸಾಗಿಸುತ್ತಿದ್ದಾಗಿ ಮಾಹಿತಿ ನೀಡಿದ್ದಾರೆ.

‘ಬ್ಯಾಂಕ್‌ಗೆ ನಗದು ಸಾಗಿಸುವ ಸಿಬ್ಬಂದಿ ಎಂದು ಹೇಳಿಕೊಂಡಿರುವ ವ್ಯಕ್ತಿಗಳು ಸುರಕ್ಷತಾ ವಿಧಾನಗಳನ್ನು ಅನುಸರಿಸಿಲ್ಲ. ಗುರುವಾರ ಸರಿಯಾದ ದಾಖಲೆಗಳನ್ನು ಒದಗಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ದಾಖಲೆಗಳನ್ನು ಒದಗಿಸದಿದ್ದರೆ ಹಣವನ್ನು ಖಜಾನೆಗೆ ಜಮಾ ಮಾಡಲಾಗುವುದು’ ಎಂದು ಜಿಲ್ಲಾ ಚುನಾವಣಾಧಿಕಾರಿ ಎಚ್.ಆರ್‌.ಮಹಾದೇವ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.