ADVERTISEMENT

ಅಮೆರಿಕ: ವಿಶ್ವ ಒಕ್ಕಲಿಗರ ಸಮ್ಮೇಳನ ಜುಲೈ 3ರಿಂದ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2025, 0:05 IST
Last Updated 24 ಮಾರ್ಚ್ 2025, 0:05 IST
   

ಬೆಂಗಳೂರು: ಅಮೆರಿಕ ಒಕ್ಕಲಿಗರ ಪರಿಷತ್ತಿನ ವತಿಯಿಂದ ಜುಲೈ 3ರಿಂದ 5ರವರೆಗೆ ಅಮೆರಿಕದ ಸ್ಯಾನ್‌ ಜೋಸ್‌ ನಗರದಲ್ಲಿ ವಿಶ್ವ ಒಕ್ಕಲಿಗರ ಸಮ್ಮೇಳನ ಆಯೋಜಿಸಲಾಗಿದೆ. 

‘ಸಮ್ಮೇಳನದಲ್ಲಿ ಜಗತ್ತಿನಾದ್ಯಂತ ನೆಲೆಸಿರುವ ಒಕ್ಕಲಿಗ ಸಮುದಾಯವನ್ನು ಒಂದುಗೂಡಿಸಿ, ನಮ್ಮ ಸಂಸ್ಕೃತಿ ಪರಂಪರೆಯನ್ನು ಸಾರುವ, ಉದ್ಯಮ ಅವಕಾಶಗಳ ವಿಸ್ತರಿಸುವ ಉದ್ದೇಶವಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ 200ಕ್ಕೂ ಹೆಚ್ಚು ಗಣ್ಯರು, ಉದ್ಯಮಿಗಳು, ರಾಜಕಾರಣಿಗಳು, ಕಲಾವಿದರು ಭಾಗವಹಿಸಲಿದ್ದಾರೆ’ ಎಂದು ಪರಿಷತ್ತಿನ ಅಧ್ಯಕ್ಷ ಧನಂಜಯ ಕೆಂಗಯ್ಯ ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತರು ಹೆಚ್ಚಿನ ಮಾಹಿತಿಗೆ https://myvpa.org/2025 ವೈಬ್‌ಸೈಟ್‌ಗೆ ಭೇಟಿ ನೀಡಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.