ADVERTISEMENT

19ಕ್ಕೆ ಎಚ್‌ಡಿಕೆ ದಂಪತಿ ಅರ್ಜಿ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2011, 19:30 IST
Last Updated 17 ಅಕ್ಟೋಬರ್ 2011, 19:30 IST

ಬೆಂಗಳೂರು: ಲೋಕಾಯುಕ್ತ ವಿಶೇಷ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ (ಅ.19) ಮುಂದೂಡಿತು.

ಜಂತಕಲ್ ಗಣಿ ಕಂಪೆನಿಗೆ ಕಾನೂನುಬಾಹಿರವಾಗಿ ಗಣಿ ಗುತ್ತಿಗೆ ನೀಡಲು ಶಿಫಾರಸು ಮಾಡಿರುವುದು ಮತ್ತು ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸಗಟು ನಿವೇಶನ ಮಂಜೂರು ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಇವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ವಿ.ಜಗನ್ನಾಥನ್ ನಡೆಸುತ್ತಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸುವಂತೆ ಅವರ ಪರ ವಕೀಲರು ನ್ಯಾಯಮೂರ್ತಿಗಳನ್ನು ಕೋರಿಕೊಂಡರು.

ಸೋಮವಾರ ವಿಚಾರಣೆ ನಡೆಸಲು ನ್ಯಾಯಮೂರ್ತಿಗಳು ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.