ADVERTISEMENT

19 ಪಬ್ಲಿಕ್‌ ಪ್ರಾಸಿಕ್ಯೂಟರ್‌ ನೇಮಕ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2021, 16:44 IST
Last Updated 15 ನವೆಂಬರ್ 2021, 16:44 IST
   

ಬೆಂಗಳೂರು: ‘ರಾಜ್ಯದಲ್ಲಿ ಖಾಲಿ ಇದ್ದ 24 ಪಬ್ಲಿಕ್‌ ಪ್ರಾಸಿಕ್ಯೂಟರ್‌ ಹುದ್ದೆಗಳ ಪೈಕಿ 19 ಹಾಗೂ 28 ಹಿರಿಯ ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳನ್ನು ನೇಮಕ ಮಾಡಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈಕುರಿತಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಮಾಹಿತಿ ನೀಡಿ, ‘ಅರ್ಹರು ಸಿಗದ ಕಾರಣ 5 ಹುದ್ದೆಗಳಿಗೆ ನೇಮಕಾತಿ ಸಾಧ್ಯವಾಗಿಲ್ಲ.68 ಹಿರಿಯ ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳ ಪೈಕಿ 28 ಮಂದಿಯನ್ನು ನೇಮಕ ಮಾಡಲಾಗಿದೆ. ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಹುದ್ದೆಗಳ ನೇಮಕಾತಿಗೆ ರಾಷ್ಟ್ರೀಯ ಕಾನೂನು ಶಾಲೆ ಪ್ರಾಥಮಿಕ ಹಂತದ ಪರೀಕ್ಷೆ ನಡೆಸಿದೆ. ಡಿಸೆಂಬರ್ ಅಂತ್ಯದೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು’ ಎಂದು ವಿವರಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ನೇಮಕಾತಿ ಪ್ರಕ್ರಿಯೆ ಮುಂದುವರಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.