ಐತಿಹಾಸಿಕ ‘ಗಾಂಧಿ ಭಾರತ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕುಂದಾ ನಗರಿ ಬೆಳಗಾವಿಯಲ್ಲಿ ಗುರುವಾರ ಸಂಭ್ರಮ ಮನೆ ಮಾಡಿತ್ತು. ರಾಷ್ಟ್ರೀಯ ಕಾಂಗ್ರೆಸ್‌ನ ಘಟಾನುಘಟಿ ನಾಯಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳ ವೀರಸೌಧ ಇಂದು ದೇಶದ ಮಹತ್ವದ ಸ್ಥಳವಾಗಿ ಪರಿಣಮಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಸೌಧದ ಮುಂದೆ ಗಾಂಧೀಜಿ ಅವರ ಪ್ರತಿಮೆ ಅನಾವರಣ ಮಾಡುವ ಮೂಲಕ ‘ಗಾಂಧಿ ಭಾರತ’ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಇದಕ್ಕೂ ಮುನ್ನ, ‘ನವ ಸತ್ಯಾಗ್ರಹ’ ಎಂಬ ಘೋಷಣಾ ಫಲಕಗಳನ್ನು ಹಿಡಿದುಕೊಂಡು ನಾಯಕರು 100 ಮೀಟರ್‌ಗಳ ಪಥಸಂಚಲನ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.