ADVERTISEMENT

22 ದಿನಗಳ ಬಳಿಕ ರಾಜ್ಯದಲ್ಲಿ ಕೋವಿಡ್‌ನಿಂದ 2 ಸಾವು, ಬೆಂಗಳೂರಲ್ಲೇ 120 ಪ್ರಕರಣ

​ಪ್ರಜಾವಾಣಿ ವಾರ್ತೆ
Published 1 ಮೇ 2022, 6:52 IST
Last Updated 1 ಮೇ 2022, 6:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, 24 ಗಂಟೆಗಳ ಅವಧಿಯಲ್ಲಿ ಕೊರೊನಾ ಸೋಂಕಿನಿಂದಾಗಿ ಇಬ್ಬರು ಸಾವಿಗೀಡಾಗಿದ್ದಾರೆ.

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ 22 ದಿನಗಳ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಮತ್ತು ವಿಜಯಪುರದಲ್ಲಿ ತಲಾ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ಸದ್ಯ ರಾಜ್ಯದಲ್ಲಿ 5,422 ಓಮೈಕ್ರಾನ್ ಪ್ರಕರಣಗಳು ಮತ್ತು 4,623 ಡೆಲ್ಟಾ ಉಪತಳಿ ಪ್ರಕರಣಗಳು ಪತ್ತೆಯಾಗಿವೆ. 1785 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.

ADVERTISEMENT

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 126 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಬೆಂಗಳೂರಿನಲ್ಲೇ 120 ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಚಿಕ್ಕಮಗಳೂರಿನಲ್ಲಿ 2, ಚಿತ್ರದುರ್ಗ 1, ಕಲಬುರಗಿ 1, ಮಂಡ್ಯ ಮತ್ತು ಉಡುಪಿಯಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿವೆ.

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,47,622ಕ್ಕೆ ಏರಿಕೆಯಾಗಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 1.26ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೂ ಕೋವಿಡ್‌ನಿಂದಾಗಿ 40,059 ಜನರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.