ADVERTISEMENT

20ರ ಬಳಿಕ ಬಿಎಸ್‌ವೈ ರಾಜ್ಯ ಪ್ರವಾಸ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2012, 19:30 IST
Last Updated 14 ಆಗಸ್ಟ್ 2012, 19:30 IST

ಬೆಂಗಳೂರು: ಜಾಮೀನು ಸಂದರ್ಭದಲ್ಲಿ ವಿಧಿಸಿದ್ದ ಷರತ್ತನ್ನು ಹೈಕೋರ್ಟ್ ಸಡಿಲಿಸಿರುವ ಕಾರಣ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಕೈಗೊಳ್ಳುವುದು ಬಹುತೇಕ ಖಚಿತವಾಗಿದೆ. ಇದೇ 20ರ ನಂತರ ಅವರು ಪ್ರವಾಸ ಕೈಗೊಳ್ಳುವರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದಾಗ ಬೆಂಗಳೂರು ಬಿಟ್ಟು ಹೋಗದಂತೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಈ ಕಾರಣದಿಂದ ಹಲವು ದಿನಗಳಿಂದ ಅವರು ನಗರದಲ್ಲೇ ಉಳಿದಿದ್ದರು. ಹೈಕೋರ್ಟ್ ಮಂಗಳವಾರ ಷರತ್ತು ಸಡಿಲಿಸಿದೆ. ಹೀಗಾಗಿ ಅವರು ರಾಜ್ಯ ಪ್ರವಾಸಕ್ಕೆ ಸಿದ್ಧತೆ ನಡೆಸಿದ್ದು, ಎರಡು-ಮೂರು ದಿನಗಳಲ್ಲಿ ವೇಳಾಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.