ಎಂ.ಬಿ.ಪಾಟೀಲ
– ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಬಿಜೆಪಿಯಲ್ಲಿ ವಿಜಯೇಂದ್ರ, ಅಶ್ವತ್ಥನಾರಾಯಣ, ಅಶೋಕ, ರಮೇಶ ಜಾರಕಿಹೊಳಿ, ಯತ್ನಾಳ ಹೀಗೆ ಇಪ್ಪತ್ತು ಗುಂಪುಗಳಿವೆ. ಪಾದಯಾತ್ರೆ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಮಧ್ಯೆಯೇ ಒಮ್ಮತವಿಲ್ಲ’ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಟೀಕಿಸಿದರು.
ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ಬಿಜೆಪಿಯವರು ಪಾದಯಾತ್ರೆ ಮಾಡಿಕೊಳ್ಳಲಿ. ಅವರ ಸರ್ಕಾರ ಇದ್ದಾಗ ನಡೆದ ಶೇ 40ರಷ್ಟು ಕಮಿಷನ್, ಕೋವಿಡ್ ಹಗರಣವೂ ಸೇರಿ ಎಲ್ಲ ಹಗರಣಗಳ ಬಗ್ಗೆ ಸತ್ಯ ಸಂಗತಿಯನ್ನು ಜನರಿಗೆ ತಿಳಿಸಲಿ ಎಂದರು.
ಬಿಜೆಪಿ ಸರ್ಕಾರವಿದ್ದಾಗ ಸಾಲು- ಸಾಲು ಹಗರಣಗಳು ನಡೆದಿದ್ದವು. ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ. ಈಗಾಗಲೇ ಅವರು ಆ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.