ಹುಬ್ಬಳ್ಳಿ: ‘ರಾಜ್ಯ ಸರ್ಕಾರದ ಬಗ್ಗೆ ಕಾಂಗ್ರೆಸ್‌ನ 20 ಶಾಸಕರಿಗೆ ಅತೃಪ್ತಿ ಇದ್ದು, ಅವರು ಯಾವ ನಿರ್ಧಾರ ಬೇಕಾದರೂ ತೆಗೆದುಕೊಳ್ಳಬಹುದು, ಕಾದು ನೋಡೋಣ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯ 104 ಶಾಸಕರು ಇದ್ದಾರೆ. ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರದಲ್ಲಿಯೂ ನೂರಕ್ಕೆ ನೂರಷ್ಟು ಗೆಲ್ಲುತ್ತೇವೆ. ಅಲ್ಲಿಗೆ ಸಂಖ್ಯಾಬಲ 106 ಆಗಲಿದ್ದು, ಮೂರು ಮಂದಿ ಪಕ್ಷೇತರ ಶಾಸಕರ ಬೆಂಬಲವೂ ಇರುವುದರಿಂದ 109ಕ್ಕೆ ಏರಿಕೆಯಾಗಲಿದ್ದು ಸರ್ಕಾರ ರಚನೆಗೆ ಸಹಕಾರಿಯಾಗಲಿದೆ’ ಎಂದರು.
ರಾಜ್ಯ ಸರ್ಕಾರ ಅವಧಿ ಪೂರೈಸುವುದಿಲ್ಲ ಎಂದು ಅವರು ಭವಿಷ್ಯ ನುಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.