ADVERTISEMENT

20 ಸಾವಿರ ಟ್ಯಾಬ್ ವಿತರಣೆ ಗುರಿ: ವೀರೇಂದ್ರ ಹೆಗ್ಗಡೆ

ಪಟ್ಟಾಭಿಷೇಕದ ವರ್ಧಂತಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 20:05 IST
Last Updated 24 ಅಕ್ಟೋಬರ್ 2020, 20:05 IST
ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಿದರು.
ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಿದರು.   

ಉಜಿರೆ: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ₹ 21 ಕೋಟಿ ವೆಚ್ಚದಲ್ಲಿ 20 ಸಾವಿರ ಟ್ಯಾಬ್‌ಗಳನ್ನು ಹಾಗೂ 10 ಸಾವಿರ ಲ್ಯಾಪ್‌ ಟಾಪ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು. ‘ಯಂತ್ರಶ್ರೀ’ ಯೋಜನೆಯಡಿ ₹ 15 ಕೋಟಿ ವೆಚ್ಚದಲ್ಲಿ ಕೃಷಿ ಯಂತ್ರಗಳನ್ನು ಖರೀದಿಸಿ, 8,000 ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಪ್ರಕಟಿಸಿದರು.

ಧರ್ಮಸ್ಥಳದಲ್ಲಿ ಶನಿವಾರ ಆಯೋಜಿಸಿದ್ದ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತಿಯ ಸರಳ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದರು.

‘ವಾತ್ಸಲ್ಯ’ ಕಾರ್ಯಕ್ರಮದಡಿ ನಿರ್ಗತಿಕರಿಗೆ ವಸತಿ ಹಾಗೂ ಜೀವನಾವಶ್ಯಕ ಸೌಲಭ್ಯ ಒದಗಿಸಲಾಗುವುದು. ಈಗಾಗಲೇ 10,400 ನಿರ್ಗತಿಕ ಕುಟುಂಬಗಳನ್ನು ಗುರುತಿಸಿದ್ದು, ₹ 2 ಕೋಟಿ ವಿನಿಯೋಗಿಸಲಾಗುವುದು. ರಾಜ್ಯದಲ್ಲಿ 150 ಕೆರೆಗಳಿಗೆ ಕಾಯಕಲ್ಪ ನೀಡಲು ₹ 10 ಕೋಟಿ ಮೀಸಲಿಡಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.