ಈಶ್ವರ ಖಂಡ್ರೆ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಅರಣ್ಯ ಪ್ರದೇಶದಿಂದ ಹೊರಗೆ ಉಳಿದಿರುವ 200ಕ್ಕೂ ಹೆಚ್ಚು ಆನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಮರಳಿಸಲು ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಾಗುವುದು. ಅದಕ್ಕಾಗಿ ಪ್ರತ್ಯೇಕ ಕೇಂದ್ರ ತೆರೆಯಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ವಿಧಾನಪರಿಷತ್‌ನಲ್ಲಿ ಬಿಜೆಪಿಯ ಶಾಂತಾರಾಮ ಬುಡ್ನಸಿದ್ಧಿ ಅವರ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಅವರು, ಮಾನವ–ಆನೆ ಸಂಘರ್ಷ ತಡೆಯಲು ರೈಲ್ವೆ ಹಳಿಗಳನ್ನು ಬಳಸಿಕೊಂಡು ಬ್ಯಾರಿಕೇಡ್ ನಿರ್ಮಿಸಲಾಗುತ್ತಿದೆ. ಕಾಡಿನಿಂದ ಜನವಸತಿ ಪ್ರದೇಶಕ್ಕೆ ಬರುವ ಆನೆಗಳ ತಡೆಗೆ ಈ ಯೋಜನೆ ಸಹಕಾರಿಯಾಗಿದೆ. ಆದರೆ, ಕಾಡಿನಿಂದ ಹೊರಬಂದು ಕಾಫಿ ತೋಟಗಳು, ಜನವಸತಿ ಪ್ರದೇಶಗಳ ಸುತ್ತ ಹಲವು ವರ್ಷಗಳಿಂದ ಬೀಡುಬಿಟ್ಟಿರುವ ಆನೆಗಳನ್ನು ಕಾಡಿಗೆ ಮರಳಿಸಬೇಕಿದೆ. ಇದು ಅತ್ಯಂತ ಕಷ್ಟಕರ ಕಾರ್ಯಾಚರಣೆ ಎಂದರು.
ಕಾಡಿನಿಂದ ಸೊಪ್ಪು, ದರಗು, ಮೇವು ಸಂಗ್ರಹಿಸುವ ಅರಣ್ಯ ವಾಸಿಗಳಿಗೆ ಕಿರುಕುಳ ಆಗದಂತೆ ಕ್ರಮ ಕೈಗೊಳ್ಳಲು ಸ್ಥಳೀಯರ ಜತೆ ಕಂದಾಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸಭೆ ನಡೆಸಲು ಸೂಚಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.