ADVERTISEMENT

2019ರ ಚುನಾವಣೆ ಗೆದ್ದರೆ ನಾನು ಪ್ರಧಾನಿಯಾಗುವೆ: ರಾಹುಲ್ ಗಾಂಧಿ

​ಪ್ರಜಾವಾಣಿ ವಾರ್ತೆ
Published 8 ಮೇ 2018, 10:58 IST
Last Updated 8 ಮೇ 2018, 10:58 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ಬೆಂಗಳೂರು:  2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆದ್ದರೆ ತಾನು ಪ್ರಧಾನಿಯಾಗಲು ಸಿದ್ಧ ಎಂದು  ರಾಹುಲ್ ಗಾಂಧಿ ಹೇಳಿದ್ದಾರೆ. ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿರುವ ರಾಹುಲ್ ಗಾಂಧಿ ಅವರಲ್ಲಿ ನೀವು ಪ್ರಧಾನಿ ಆಕಾಂಕ್ಷಿಯೇ? ಎಂದು ಕೇಳಿದಾಗ, ಮೋದಿಯವರು ಇನ್ನೊಮ್ಮೆ ಪ್ರಧಾನಿ ಆಗಲ್ಲ ಎಂದು ನನಗೆ ಗೊತ್ತಿದೆ. ಅವರ ಮುಖದಲ್ಲಿ ಅದು ವ್ಯಕ್ತವಾಗುತ್ತಿದ್ದು, ಈ ವಿಷಯ ಅವರಿಗೂ ತಿಳಿದಿದೆ ಎಂದಿದ್ದಾರೆ.

ಹಾಗಾದರೆ ನೀವು ಪ್ರಧಾನಿಯಾಗುತ್ತೀರಾ ? ಎಂದು ಮತ್ತೊಮ್ಮೆ ಪ್ರಶ್ನೆ ಕೇಳಿದಾಗ, ಕಾಂಗ್ರೆಸ್ ಪಕ್ಷ ಯಾವ ರೀತಿ ಗೆಲ್ಲುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆಲುವು ಸಾಧಿಸಿದರೆ ಖಂಡಿತಾ ನಾನು ಪ್ರಧಾನಿಯಾಗುವೆ 

ಒಂದು ವೇಳೆ ಕಾಂಗ್ರೆಸ್ ಬೇರೆ ಪಕ್ಷಗಳೊಂದಿಗೆ ಕೈಜೋಡಿಸಿದರೆ, ಬಿಜೆಪಿ ಈ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುವುದಿಲ್ಲ. ಮುಂದಿನ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಮತ್ತು ಮೋದಿಯವರು ಪ್ರಧಾನಿಯಾಗುವ ಸಾಧ್ಯತೆಗಳೂ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.