ADVERTISEMENT

2023ಕ್ಕೆ ಕಾಂಗ್ರೆಸ್‌ ಮೂರು ಹೋಳು: ಕಟೀಲ್‌

​ಪ್ರಜಾವಾಣಿ ವಾರ್ತೆ
Published 12 ಜನವರಿ 2021, 14:07 IST
Last Updated 12 ಜನವರಿ 2021, 14:07 IST
ಮಂಡ್ಯದಲ್ಲಿ ಮಂಗಳವಾರ ನಡೆದ ಜನಸೇವಕ ಸಮಾವೇಶದಲ್ಲಿ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಸಚಿವ ಕೆ.ಸಿ.ನಾರಾಯಣಗೌಡ ಬೆಳ್ಳಿಗದೆ ಉಡುಗೊರೆ ನೀಡಿದರು
ಮಂಡ್ಯದಲ್ಲಿ ಮಂಗಳವಾರ ನಡೆದ ಜನಸೇವಕ ಸಮಾವೇಶದಲ್ಲಿ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಸಚಿವ ಕೆ.ಸಿ.ನಾರಾಯಣಗೌಡ ಬೆಳ್ಳಿಗದೆ ಉಡುಗೊರೆ ನೀಡಿದರು   

ಮಂಡ್ಯ: ‘ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಚರ್ಚೆ ಆರಂಭವಾಗಿದ್ದು ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಪಕ್ಷ ಮೂರು ಹೋಳಾಗಿ ಒಡೆದು ಹೋಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭವಿಷ್ಯ ನುಡಿದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಸದಸ್ಯರನ್ನು ಸನ್ಮಾನಿಸಲು ಪಕ್ಷ ಮಂಗಳವಾರ ಆಯೋಜಿಸಿದ್ದ ‘ಜನಸೇವಕ’ ಸಮಾವೇಶದದಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್‌ ಮುಖಂಡರಲ್ಲಿ ಒಬ್ಬರ ಮೇಲೆ ಮತ್ತೊಬ್ಬರಿಗೆ ನಂಬಿಕೆ ಇಲ್ಲ, ನಾಯಕತ್ವದ ಮೇಲೆ ಅನುಮಾನ ಮೂಡಿದೆ. ಸಿದ್ದರಾಮಯ್ಯ ಅವರು ಮುಂದೆ ತಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡಿದ್ದಾರೆ. ಸತೀಶ್‌ ಜಾರಕಿಹೊಳಿ, ಡಿ.ಕೆ.ಶಿವಕುಮಾರ್‌ ಅವರೂ ತಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಚುನಾಣೆ ವೇಳೆಗೆ ಕಾಂಗ್ರೆಸ್‌ ಮೂರು ಪಕ್ಷವಾಗಿ ಒಡೆದು ಹೋಗಲಿದೆ’ ಎಂದರು.

ADVERTISEMENT

‘ಬಿಜೆಪಿಯಲ್ಲಿ ನಾಯಕತ್ವದ ಚರ್ಚೆ ಇಲ್ಲ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ದಲಿತ ಮುಖ್ಯಮಂತ್ರಿ ವಿಚಾರ ಸದಾ ಚರ್ಚೆಗೆ ಬರುತ್ತಿತ್ತು. ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಅವರನ್ನು ಕಾಂಗ್ರೆಸ್‌ ಮುಖ್ಯಮಂತ್ರಿ ಮಾಡಲಿಲ್ಲ. ಆದರೆ ಬಿಜೆಪಿ ಸರ್ಕಾರ ದಲಿತ ಮುಖಂಡರಾದ ಗೋವಿಂದ ಕಾರಜೋಳ ಅವರನ್ನು ಉಪಮುಖ್ಯಮಂತ್ರಿ ಮಾಡಿದೆ’ ಎಂದರು.

‘ಹಸು–ಕರು ಹೆಸರಿನಲ್ಲಿ ರಾಜಕಾರಣ ಮಾಡಿದ ಕಾಂಗ್ರೆಸ್‌ ಈಗ ಗೋಹಂತಕರ ಪರ ನಿಂತಿದೆ. ಮುಖಂಡನೊಬ್ಬ ಗೋಮಾಂಸ ತಿನ್ನುವುದಾಗಿ ಹೇಳಿ ಭಾರತೀಯ ಸಂಸ್ಕೃತಿಗೆ ಅವಮಾನ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಗೋವಿನ ಶಾಪ ತಟ್ಟಿದೆ, ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿದೆ’ ಎಂದರು.

‘ಮಂಡ್ಯ ಬಿಜೆಪಿ ನಾಯಕರು ಭೀಮನ ಗದೆಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಮಂಡ್ಯ ಗದೆಯಿಂದ ವಿಧಾನಸೌಧದಲ್ಲಿ ಕಾಂಗ್ರೆಸ್‌ ಮುಖಂಡರ ಮಂಡೆಗೆ ಹೊಡೆಯುತ್ತೇನೆ’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.