ಬಂಗಾರಪೇಟೆ: ಇದೇ 9ರಂದು ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಬುಧವಾರ 6 ನಾಮಪತ್ರ ಸಲ್ಲಿಕೆಯಾಗಿವೆ. ಇದುವರೆಗೆ ಒಟ್ಟು 21 ನಾಮಪತ್ರಗಳನ್ನು ಸಲ್ಲಿಸಲಾಗಿದೆ. ಕೆಲವರು ಒಂದಕ್ಕಿಂತ ಹೆಚ್ಚು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಕಣದಲ್ಲಿ ಒಟ್ಟು 15 ಅಭ್ಯರ್ಥಿಗಳಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಎಂ. ನಾರಾಯಣಸ್ವಾಮಿ, ಕಾಂಗ್ರೆಸ್‌ನಿಂದ ಕೆ.ಎಂ. ನಾರಾಯಣಸ್ವಾಮಿ, ಜೆಡಿಎಸ್‌ನಿಂದ ಸಿ. ವೆಂಕಟೇಶಪ್ಪ, ಜೆಡಿಯುನಿಂದ ರವಿಕುಮಾರ್ ಹಾಗೂ 11 ಮಂದಿ ಪಕ್ಷೇತರರು ಉಪ ಚುನಾವಣಾ ಕಣದಲ್ಲಿ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.