ADVERTISEMENT

23ಕ್ಕೆ ನಾಮಪತ್ರ ಸಲ್ಲಿಕೆ: ಎಂ.ವೈ.ಪಾಟೀಲ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2018, 6:38 IST
Last Updated 18 ಏಪ್ರಿಲ್ 2018, 6:38 IST
ಎಂ.ವೈ.ಪಾಟೀಲ
ಎಂ.ವೈ.ಪಾಟೀಲ   

ಕಲಬುರ್ಗಿ: ಅಫಜಲಪುರ ಮತಕ್ಷೇತ್ರದಿಂದ ಏ.23ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ.ವೈ.ಪಾಟೀಲ ಹೇಳಿದರು.

ಇಲ್ಲಿನ ಐವಾನ್ ಇ ಶಾಹಿ ಬಡಾವಣೆಯಲ್ಲಿರುವ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಬುಧವಾರ ಬಿ ಫಾರ್ಮ್ ಪಡೆದುಕೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು, ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ. ಅಫಜಲಪುರದಲ್ಲಿ ನನ್ನ ಗೆಲುವು ಖಚಿತ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.