ADVERTISEMENT

24ರಂದು ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2017, 19:30 IST
Last Updated 12 ಅಕ್ಟೋಬರ್ 2017, 19:30 IST
ಡಿ.ವೀರೇಂದ್ರ ಹೆಗ್ಗಡೆ
ಡಿ.ವೀರೇಂದ್ರ ಹೆಗ್ಗಡೆ   

ಉಜಿರೆ:‌ ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ 1968ರ ಅಕ್ಟೋಬರ್ 24 ರಂದು ಸಂಪ್ರದಾಯದಂತೆ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದ ಡಿ. ವೀರೇಂದ್ರ ಹೆಗ್ಗಡೆಯವರು 50 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿದ್ದು, ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ವರ್ಧಂತ್ಯುತ್ಸವ ಇದೇ 24ರಂದು ನಡೆಯಲಿದೆ.

ಧರ್ಮಸ್ಥಳದ ಸಿಬ್ಬಂದಿ, ಊರಿನ ನಾಗರಿಕರು ಹಾಗೂ ಭಕ್ತಾಭಿಮಾನಿಗಳು ಸರಳ ರೀತಿಯಲ್ಲಿ ಸುವರ್ಣ ಮಹೋತ್ಸವವನ್ನು ಆಚರಿಸಲು ನಿರ್ಧರಿಸಿದ್ದಾರೆ. ಡಿ. ಹರ್ಷೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸಿದ್ದು, ಭರದಿಂದ ಸಿದ್ದತೆಗಳು ನಡೆಯುತ್ತಿವೆ.

24ರಂದು ಸಂಜೆ 5.30ಕ್ಕೆ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಮೈಸೂರು ಅರಮನೆಯ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಧ್ಯಕ್ಷತೆ ವಹಿಸುವರು. ಶಿಕ್ಷಣ ತಜ್ಞ, ಸಾಹಿತಿ ಡಾ.ಗುರುರಾಜ ಕರ್ಜಗಿ ಅಭಿನಂದನಾ ಭಾಷಣ ಮಾಡುವರು.

ADVERTISEMENT

ಹೆಗ್ಗಳಿಕೆ: ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಅತಿ ದೀರ್ಘಕಾಲ ಆಡಳಿತ ನಡೆಸಿದ ಹೆಗ್ಗಳಿಕೆ ಇವರದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.