ಬೆಂಗಳೂರು: ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಶುಶ್ರೂಷಕರು, ಸಹಾಯಕ ಗ್ರಂಥಪಾಲಕ ಮತ್ತು ಫಿಸಿಯೋಥೆರಪಿಸ್ಟ್ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಇದೇ 24ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ಹೈಕೋರ್ಟ್ನ ಆದೇಶದ ಅನ್ವಯ ಪರೀಕ್ಷೆ ನಡೆಸಲಾಗುತ್ತಿದ್ದು, ಧಾರವಾಡದ ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರ ಬೆಳಿಗ್ಗೆ 10.30ರಿಂದ 11.40ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.