
ಪ್ರಜಾವಾಣಿ ವಾರ್ತೆ
ಮಂಗಳೂರು: ಹವಾಲಾ ಹಣ ಸಾಗಾಟದ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಇಲ್ಲಿನ ರಥಬೀದಿಯಲ್ಲಿ ಶನಿವಾರ ಬೆಳಿಗ್ಗೆ ಒಬ್ಬನನ್ನು ಬಂಧಿಸಿ ₹24 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ದಾವಣಗೆರೆ ನಿವಾಸಿ ಮಂಜುನಾಥ್ (51) ಬಂಧಿತ ಆರೋಪಿ. ಮಂಗಳೂರು ಉತ್ತರ (ಬಂದರು) ಠಾಣೆ ಪೊಲೀಸರು ಶನಿವಾರ ಬೆಳಿಗ್ಗೆ ಗಸ್ತು ತಿರುಗುತ್ತಿದ್ದರು. ಆಗ ರಥಬೀದಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ನಡೆದು ಹೋಗುತ್ತಿದ್ದ ಈತನನ್ನು ವಶಕ್ಕೆ ಪಡೆಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.