ಸಾಂದರ್ಭಿಕ ಚಿತ್ರ
– ಪ‍್ರಜಾವಾಣಿ ಚಿತ್ರ
ನವದೆಹಲಿ: ಗ್ರಾಮೀಣ ಸಂಪರ್ಕ ಬಲಪಡಿಸಲು ಗ್ರಾಮೀಣಾಭಿವೃದ್ಧಿ ಸಚಿವಾಲಯವು ಪಿಎಂ-ಜನ್‌ಮನ್ ಯೋಜನೆಯಡಿಯಲ್ಲಿ ಕರ್ನಾಟಕಕ್ಕೆ 18 ರಸ್ತೆಗಳು ಮತ್ತು 2 ಸೇತುವೆಗಳನ್ನು ಮಂಜೂರು ಮಾಡಿದೆ. ಇದರ ವೆಚ್ಚ ಅಂದಾಜು ₹25.17 ಕೋಟಿ.
ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕ ವ್ಯವಸ್ಥೆ ಅಭಿವೃದ್ಧಿಪಡಿಸುವ ಮೂಲಕ, ದೂರದ ಹಳ್ಳಿಗಳು ಮತ್ತು ನಗರ ಕೇಂದ್ರಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಮೂಲಕ ದುರ್ಬಲ ಬುಡಕಟ್ಟು ಗುಂಪುಗಳ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸಬಹುದು. ಈ ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿ, ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆ ಉತ್ತೇಜಿಸಲಾಗುವುದು ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.