ADVERTISEMENT

ಮಂಡ್ಯ ಬಸ್‌ ದುರಂತ: ಮುಖ್ಯಮಂತ್ರಿ ಸೇರಿದಂತೆ ಗಣ್ಯರಿಂದ ಸಂತಾಪ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2018, 10:45 IST
Last Updated 24 ನವೆಂಬರ್ 2018, 10:45 IST
   

ಪಾಂಡವಪುರ: ತಾಲೂಕಿನ ಕನಗನಮರಡಿ ಗ್ರಾಮದ ಹತ್ತಿರವಿ.ಸಿ ನಾಲೆಗೆ ಶನಿವಾರ ಖಾಸಗಿ ಬಸ್‌ಉರುಳಿದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಘಟನೆಸಂಬಂಧಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಬಿ.ಎಸ್‌.ಯಡಿಯೂರಪ್ಪ, ಸಂಸದ ಪ್ರಹ್ಲಾದ ಜೋಶಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಸದ್ಯ ಕುಮಾರಸ್ವಾಮಿ ಅವರು ಮಂಡ್ಯಕ್ಕೆ ಭೇಟಿ ನೀಡಿದ್ದಾರೆ. ಇದರಹಿನ್ನೆಲೆ ಇಂದು ಸಂಜೆ ನಡೆಯಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ADVERTISEMENT

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌. ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ.

ಇದುವರೆಗೆ 25ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಶೋಧಕಾರ್ಯಾಚರಣೆ ಮುಂದುವರಿದಿದೆ.

*

*

*

*

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.