ADVERTISEMENT

2.50 ಲಕ್ಷ ಗ್ರಾ.ಪಂಗಳಿಗೆ ಇಂಟರ್‌ನೆಟ್‌ ಸೇವೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2017, 19:30 IST
Last Updated 8 ಜೂನ್ 2017, 19:30 IST
ಪಿ.ಪಿ.ಚೌಧರಿ
ಪಿ.ಪಿ.ಚೌಧರಿ   

ಹಾಸನ: 2018ರ ಡಿಸೆಂಬರ್‌ ಅಂತ್ಯದೊಳಗೆ ದೇಶದ 2.50 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಇಂಟರ್‌ನೆಟ್‌ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೇಂದ್ರ ಕಾನೂನು, ನ್ಯಾಯ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಪಿ.ಪಿ.ಚೌಧರಿ ಇಲ್ಲಿ ಗುರುವಾರ ಹೇಳಿದರು.

ಮೂರು ವರ್ಷಗಳಲ್ಲಿ 1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಇಂಟರ್‌ನೆಟ್‌ ಸೌಲಭ್ಯ ಕಲ್ಪಿಸಲಾಗಿದ್ದು, ಬಾಕಿ ಇರುವ 1.50 ಲಕ್ಷ ಪಂಚಾಯಿತಿಗಳಿಗೆ ಆಪ್ಟಿಕಲ್‌ ಫೈಬರ್‌ ಅಳವಡಿಸಿ ಸಂಪರ್ಕ ಕಲ್ಪಿಸಲಾಗುವುದು. ಇದರಿಂದ ಗ್ರಾಮೀಣ ಪ್ರದೇಶದ 85 ಕೋಟಿ ಜನರಿಗೆ ಅಂತರ್ಜಾಲ ಸೇವೆ ಪಡೆಯಲು ಅನುಕೂಲವಾಗುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT