ADVERTISEMENT

25,600 ಅತಿಥಿ ಶಿಕ್ಷಕರ ನೇಮಕ

​ಪ್ರಜಾವಾಣಿ ವಾರ್ತೆ
Published 16 ಜೂನ್ 2018, 5:19 IST
Last Updated 16 ಜೂನ್ 2018, 5:19 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಕೊರತೆ ನೀಗಲು 25,600 ಅತಿಥಿ ಶಿಕ್ಷಕರನ್ನು ನೇಮಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಪ್ರಾಥಮಿಕ 12,500, ಮಾಧ್ಯಮಿಕ ಶಾಲೆಗಳಲ್ಲಿ 10 ಸಾವಿರ ಹಾಗೂ ಪ್ರೌಢಶಾಲೆಗಳಲ್ಲಿ 3,100 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಇಲಾಖೆ ಸುತ್ತೋಲೆ ಹೊರಡಿಸಿದೆ.

ಮಾಧ್ಯಮಿಕ ಶಾಲೆಗಳಲ್ಲಿ ಖಾಲಿಯಿದ್ದ 10 ಸಾವಿರ ಪದವೀಧರ ಶಿಕ್ಷಕರ ಹುದ್ದೆಗಳ ಭರ್ತಿಗೆ ಈಗಾಗಲೇ ನೇರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.

ADVERTISEMENT

ಈ ಪ್ರಕ್ರಿಯೆ ಪೂರ್ಣಗೊಂಡು ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ಇನ್ನೂ ಐದಾರು ತಿಂಗಳು ಆಗಲಿದ್ದು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಹುದ್ದೆಗಳಿಗೂ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ನಂತರ ಅತಿಥಿ ಶಿಕ್ಷಕರ ನೇಮಕಾತಿ ರದ್ದಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.

ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಮೆರಿಟ್ ಆಧಾರದ ಮೇಲೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಮೂಲಕವೇ ನಿರ್ವಹಿಸಲಾಗುತ್ತದೆ.

ಮಾಸಿಕ ಗೌರವಧನ ₹7,500 ಹಾಗೂ ₹8,000 ನಿಗದಿಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.