ADVERTISEMENT

26ರಿಂದ ರಾಷ್ಟ್ರೀಯ ಶೈಕ್ಷಣಿಕ ಸಮಾವೇಶ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2012, 19:30 IST
Last Updated 18 ಅಕ್ಟೋಬರ್ 2012, 19:30 IST

ಬೆಂಗಳೂರು: ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಇದೇ 26ರಿಂದ ನಗರ ಹೊರವಲಯದ ಮಾಗಡಿ ರಸ್ತೆಯಲ್ಲಿರುವ ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರದಲ್ಲಿ 3 ದಿನಗಳ ರಾಷ್ಟ್ರೀಯ ಶೈಕ್ಷಣಿಕ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಕೆ. ಬಾಲಕೃಷ್ಣ ಭಟ್ ತಿಳಿಸಿದರು.

ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಣಿಕ ಮಹಾಸಂಘದ 5ನೇ ರಾಷ್ಟ್ರೀಯ ಅಧಿವೇಶನದ ಅಂಗವಾಗಿ ಸಮಾವೇಶ ನಡೆಯಲಿದ್ದು, ಸಿ.ಎಂ ಜಗದೀಶ ಶೆಟ್ಟರ್ ಉದ್ಘಾಟಿಸಲಿದ್ದಾರೆ. ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು `ಶಿಕ್ಷಕ ಸಮಾಚಾರ~ ಮಾಸಿಕದ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ 300 ಶಿಕ್ಷಕರನ್ನು ಆಹ್ವಾನಿಸಲಾಗಿದೆ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.