ADVERTISEMENT

ಖುದ್ದು ಹಾಜರಾಗಲು ರಮೇಶಗೆ ಎರಡನೇ ಬಾರಿಗೆ ಅವಕಾಶ:

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2019, 17:20 IST
Last Updated 4 ಫೆಬ್ರುವರಿ 2019, 17:20 IST

ಬೆಳಗಾವಿ: ‘ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿದ್ದ ರಮೇಶ ಜಾರಕಿಹೊಳಿ ಅವರಿಗೆ ಪಕ್ಷದ ವರಿಷ್ಠರು ಮತ್ತೆ ನೋಟಿಸ್‌ ನೀಡಿದ್ದು, ಖುದ್ದು ಹಾಜರಾರುವಂತೆ ಸೂಚಿಸಿದ್ದಾರೆ. ಹಾಜರಾಗದಿದ್ದರೆ ಪಕ್ಷ ತೀರ್ಮಾನ ಕೈಗೊಳ್ಳಬಹುದು’ ಎಂದು ಅರಣ್ಯ ಸಚಿವ, ಸಹೋದರ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಶಾಸಕಾಂಗ ಪಕ್ಷದ ಸಭೆಗೆ ನಾಲ್ಕು ಜನ ಶಾಸಕರು ಗೈರು ಹಾಜರಾಗಿದ್ದರು. ಖುದ್ದು ಹಾಜರಾಗುವಂತೆ ಇವರಿಗೆ ಎರಡನೇ ಬಾರಿಗೆ ಅವಕಾಶ ನೀಡಲಾಗಿದೆ. ತಮ್ಮ ಸಮಸ್ಯೆಯ ಬಗ್ಗೆ ಹೇಳಿಕೊಂಡರೆ ಪರಿಹಾರ ಆಗಬಹುದು. ಇಲ್ಲದಿದ್ದರೆ ಪಕ್ಷ ತನ್ನದೇ ಆದ ತೀರ್ಮಾನ ಕೈಗೊಳ್ಳುತ್ತದೆ’ ಎಂದು ಹೇಳಿದರು.

ಬಜೆಟ್‌ ಮಂಡಿಸುತ್ತಾರೆ:

ADVERTISEMENT

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಖಂಡಿತವಾಗಿಯೂ ಬಜೆಟ್‌ ಮಂಡಿಸಲಿದ್ದಾರೆ. ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.