ಬೆಂಗಳೂರು: ಕೋವಿಡ್ ಕರ್ತವ್ಯದ ಸಂದರ್ಭದಲ್ಲಿ ಮೃತಪಟ್ಟ ಅನುದಾನಿತ ಶಾಲಾ ಶಿಕ್ಷಕರ ಕುಟುಂಬಕ್ಕೂ ₹ 30 ಲಕ್ಷ ವಿಮೆ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಆರ್ಥಿಕ ಇಲಾಖೆ, ‘ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಿದ ಆದೇಶದ ಪ್ರತಿ ಇದ್ದರೆ ಪರಿಹಾರ ಮೊತ್ತ ನೀಡಲು ಪರಿಗಣಿಸಬಹುದು’ ಎಂದು ಸ್ಪಷ್ಟಪಡಿಸಿದೆ. ಮೃತಪಟ್ಟವರಿಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಕ್ಷಮ ಪ್ರಾಧಿಕಾರ (ಇಲಾಖೆಯ ಮುಖ್ಯಸ್ಥರು) ಸಲ್ಲಿಸಬೇಕಿದೆ.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಎಲ್ಲ ಇಲಾಖೆಗಳ ಎಲ್ಲ ವೃಂದಗಳ ಸರ್ಕಾರಿ ನೌಕರರು ಕೋವಿಡ್ ಕರ್ತವ್ಯದ ವೇಳೆ ಮೃತಪಟ್ಟರೆ, ಅವರ ಕುಟುಂಬಕ್ಕೆ ₹ 30 ಲಕ್ಷ ವಿಮೆ ಪರಿಹಾರ ಮಂಜೂರು ಮಾಡುವ ಸಂಬಂಧ ಈ ಹಿಂದೆಯೇ ಆದೇಶ ಹೊರಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.