ADVERTISEMENT

300 ಶಾಲೆಗಳ ಆರಂಭಕ್ಕೆ ಪ್ರಸ್ತಾವ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2012, 19:30 IST
Last Updated 1 ಆಗಸ್ಟ್ 2012, 19:30 IST

ಬೆಂಗಳೂರು: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ರಾಜ್ಯದಲ್ಲಿ 300 ಪ್ರೌಢ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. 138 ಶಾಲೆ ಆರಂಭಕ್ಕೆ ಶೀಘ್ರ ಒಪ್ಪಿಗೆ ದೊರೆಯುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ವಿಧಾನಸಭೆಗೆ ತಿಳಿಸಿದರು.

ಬಿಜೆಪಿಯ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, `ರಾಜ್ಯದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ ಈವರೆಗೆ 305 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ. 8ನೇ ತರಗತಿಯಲ್ಲಿ ಕನಿಷ್ಠ 70 ಮಕ್ಕಳು ಇರುವ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಯನ್ನು ಆರಂಭಿಸಲು ಈ ಯೋಜನೆಯಲ್ಲಿ ಅವಕಾಶ ಇದೆ. ಈಗ 300 ಪ್ರೌಢ ಶಾಲೆ ಆರಂಭಿಸಲು ಪ್ರಸ್ತಾವ ಸಲ್ಲಿಸಿದ್ದೇವೆ. 138 ಶಾಲೆಗಳಿಗೆ ಒಪ್ಪಿಗೆ ದೊರೆಯುವ ಸಾಧ್ಯತೆ ಇದೆ. ಹಿಂದುಳಿದ ತಾಲ್ಲೂಕುಗಳಲ್ಲಿ ಆದ್ಯತೆ ಮೇಲೆ ಈ ಶಾಲೆ ಆರಂಭಿಸಲಾಗುವುದು~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.