ADVERTISEMENT

ಬೆಂಗಳೂರು: ಲೋಕಾಯುಕ್ತ ಕಚೇರಿಯ 32 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 22 ಜನವರಿ 2022, 16:44 IST
Last Updated 22 ಜನವರಿ 2022, 16:44 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ಇದೇ ಬುಧವಾರದಿಂದ ಶನಿವಾರದವರೆಗೆ 365 ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಂಟಲು ಹಾಗೂ ಮೂಗಿನ ದ್ರವದ ಮಾದರಿಗಳ ಪರೀಕ್ಷೆ ನಡೆಸಿದ್ದು, 32 ಜನರಿಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದೆ ಎಂದು ಲೋಕಾಯುಕ್ತ ರಿಜಿಸ್ಟ್ರಾರ್‌ ತಿಳಿಸಿದ್ದಾರೆ.

‘ಲೋಕಾಯುಕ್ತದಲ್ಲಿ 466 ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಲ್ಲಿ 32 ಮಂದಿಯಲ್ಲಿ ಮಾತ್ರ ಕೋವಿಡ್‌ ಪತ್ತೆಯಾಗಿದೆ. ಈ ಪೈಕಿ ಬಹುತೇಕರಲ್ಲಿ ಸೋಂಕಿನ ಲಕ್ಷಣಗಳಿಲ್ಲ. ಎಲ್ಲರೂ ಆರೋಗ್ಯವಾಗಿದ್ದು, ಮನೆಗಳಲ್ಲೇ ಪ್ರತ್ಯೇಕವಾಸದಲ್ಲಿ ಇದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ವಿಚಾರಣೆಗೆ ಹಾಜರಾಗುವ ಅಧಿಕಾರಿಗಳು, ನೌಕರರು, ದೂರುದಾರರು ಮತ್ತು ಸಾಕ್ಷಿಗಳಿಂದ ಕೋವಿಡ್‌ ಹರಡುವ ಅಪಾಯವಿರುವುರಿಂದ ವಿಚಾರಣೆಗಳನ್ನು ಮುಂದೂಡುವಂತೆ ಕೆಲವು ವಕೀಲರು ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಆಯಾ ಪ್ರಕರಣಗಳ ವಿಚಾರಣಾಧಿಕಾರಿಗಳಿಗೆ ನೀಡಲಾಗಿದೆ. ಫೆಬ್ರುವರಿಯಿಂದ ಎಂದಿನಂತೆ ವಿಚಾರಣೆಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.