ಬೆಂಗಳೂರು: ಕಾಂಗ್ರೆಸ್ 124 ಕ್ಷೇತ್ರಗಳಿಗೆ ಘೋಷಿಸಿದ ಮೊದಲ ಪಟ್ಟಿಯಲ್ಲಿ ಜಾತಿವಾರು ಲೆಕ್ಕಾಚಾರವೂ ಗಮನ ಸೆಳೆದಿದೆ. ನಿರೀಕ್ಷೆಯಂತೆ ಲಿಂಗಾಯತ ಸಮುದಾಯದವರಿಗೆ ಹೆಚ್ಚು ಟಿಕೆಟ್ ನೀಡಲಾಗಿದೆ. ಉಳಿದಂತೆ ಒಕ್ಕಲಿಗ, ಪರಿಶಿಷ್ಟ ಜಾತಿ, ಕುರುಬ ಮತ್ತು ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ.
ಈ ಬಾರಿ ಲಿಂಗಾಯತ ಸಮುದಾಯ ಅಭ್ಯರ್ಥಿಗಳಿಗೆ ಹೆಚ್ಚು ಟಿಕೆಟ್ ನೀಡಬೇಕು ಎಂದು ಅಖಿಲ ಭಾರತ ಲಿಂಗಾಯತ ಮಹಾಸಭಾ ಈಗಾಗಲೇ ಕಾಂಗ್ರೆಸ್ ವರಿಷ್ಠರಲ್ಲಿ ಬೇಡಿಕೆ ಇಟ್ಟಿದೆ. ಅದಕ್ಕೆ ಪೂರಕವಾಗಿ, ಮೊದಲ ಪಟ್ಟಿಯಲ್ಲಿ ಈ ಸಮುದಾಯದ 32 ಅಭ್ಯರ್ಥಿಗಳು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯದ ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ, 36 ಅನ್ನು ಪರಿಶಿಷ್ಟ ಜಾತಿಗೆ, 15 ಕ್ಷೇತ್ರಗಳನ್ನು ಪರಿಶಿಷ್ಟ ಪಂಗಡದವರಿಗೆ ಮೀಸಲಿರಿಸಲಾಗಿದೆ. ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 22 ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಮತ್ತು 10 ಕ್ಷೇತ್ರಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.